ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ.) ಸಂಸ್ಥೆಯು ಪರಮ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ 2006ರಲ್ಲಿ ಬಂಟ್ವಾಳ ತಾಲೂಕಿನಲ್ಲಿ ಸಂಸ್ಥೆಯು ಪ್ರಾರಂಭವಾಯಿತು. ಮಕ್ಕಳ ಸಾಂಸ್ಕ್ರತಿಕ ಬೆಳವಣಿಗೆಗೆ ಪೂರಕವಾಗಿ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಕ್ಕಳಿಗೆ ಯಕ್ಷಗಾನ, ಭರತನಾಟ್ಯ, ಶಾಸ್ತ್ರಿಯ ಸಂಗೀತ ಚಿತ್ರಕಲಾ ಚೆಂಡೆ ವಾದನ ನಾಸಿಕ್ ಬ್ಯಾಂಡ್ ವಾದನ ಇದೇ ಮೊದಲಾದ ಸಾಂಸ್ಕ್ರತಿಕ ಚಟುವಟಿಕೆಗಳ ಬಗ್ಗೆ ನುರಿತ ತರಬೇತುದಾರರಿಂದ ತರಬೇತಿಯಲ್ಲಿ ನೀಡುತ್ತಾ ಬಂದಿದೆ. 5228 ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ 43 ಶಾಖೆಗಳೊಂದಿಗೆ ತರಬೇತಿಯನ್ನು ಪಡೆದುಕೊಂಡಿರುತ್ತಾರೆ.